ವಿಜಯಪುರ.ಸೆ.27- ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್ ಲಸಿಕಾ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಛೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು ಗ್ರಾಮಾಂತರ ಪ್ರದೇಶಗಳಲ್ಲಿ ವ್ಯಾಕ್ಸಿನೇಷನ್ ಕಾರ್ಯಕ್ಕೆ ಹೆಚ್ಚು ಗಮನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿಸಿ ವ್ಯಾಕ್ಸಿನೇಷನ್ ಕಾರ್ಯ ವನ್ನು ಯಶಸ್ವಿಗೊಳಿಸಿ ಹಾಗೂ ನಿಗದಿತ ಗುರಿ ಸಾಧಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅಧಿಕಾರಿಗಳು ಮನೆಮನೆಗೂ ತೆರಳಿ ಸರ್ವೇ ಕಾರ್ಯ ನಡೆಸಿ ಲಸಿಕಾ ಕಾರ್ಯ ಕೈಗೊಳ್ಳುವಂತೆ ಅವರು ಸೂಚಿಸಿದರು.
ಲಸಿಕಾಕರಣ ಕಾರ್ಯದಲ್ಲಿ ಅಧಿಕಾರಿಗಳು ನಿಗದಿತ ಗುರಿಯನ್ನು ಸಾಧಿಸಿ, ಲಸಿಕಾ ಮೇಳವನ್ನು ಕೂಡ ಯಶಸ್ವಿಗೊಳಿಸುವಂತೆ ಅವರು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ್ ಕಳಸದ, ಉಪವಿಭಾಗಾಧಿಕಾರಿ ಬಲರಾಮ್ ಲಮಾಣಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ,ಜಿಲ್ಲಾ ಆರೋಗ್ಯಧಿಕಾರಿ ರಾಜಕುಮಾರ್ ಎರಗಲ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್ ಪೋಸ್ಟ್ ಮಾಡಿ