ಬೆಂಗಳೂರು ಪಾಟರಿ ರಸ್ತೆಯ ಕ್ಲಾರೆನ್ಸ್ ಖಾಸಗಿ ಶಾಲೆಗೆ ಬುಧವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಈ ಶಾಲೆಗೆ “ನಿಮ್ಮ ಶಾಲೆಯಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಶಾಲಾ ಆಡಳಿತ ಮಂಡಳಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ: ಪೊಲೀಸರ ದೌಡು
SAMARA VAANI
0

ಕಾಮೆಂಟ್ ಪೋಸ್ಟ್ ಮಾಡಿ