ಬುಧವಾರ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಪಾಲಿಕೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಪರಿವೀಕ್ಷಣೆ ನಡೆಸಿದ ಅವರು, ಪೌರಕಾರ್ಮಿಕರ ಗೃಹಭಾಗ್ಯ (ಪಿ.ಕೆ.ಜಿ.ಬಿ)ಯೋಜನೆಯಡಿ ವಿಜಯಪುರ ನಗರದ ಹಂಚನಾಳ ಪಿ.ಎಚ್ ಗ್ರಾಮಕ್ಕೆ ಭೇಟಿ ನೀಡಿ, ಈಗಾಗಲೇ ನಿರ್ಮಾಣಗೊಂಡಿರುವ ಹಾಗೂ ಹಂಚಿಕೆ ಮಾಡಲಾದ ಜಿ+2 ಮಾದರಿಯ 56 ಗುಂಪು ಮನೆಗಳಲ್ಲಿ ವಾಸವಾಗಿರುವ ಫಲಾನುಭವಿಗಳ ಸಮಸ್ಯೆಯನ್ನು ಆಲಿಸಿದ ಅವರು, ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಮನೆಗಳಿಗೆ ವಿದ್ಯುತ್ ಸಂಪರ್ಕ, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಗೆ ಕ್ರಮ ವಹಿಸುವಂತೆ ತಿಳಿಸಿದ ಅವರು, ನಿರ್ಮಾಣ ಹಂತದಲ್ಲಿರುವ 60 ಗುಂಪು ಮನೆಗಳ ನಿರ್ಮಾಣ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಿ ಉಳಿದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ನಗರದ ಅಲ್ ಅಮೀನ್ ಮೆಡಿಕಲ್ ಕಾಲೇಜ್ ಹಿಂಭಾಗದಲ್ಲಿ ಪಿಎಂಎವಾಯ್ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಜಿ+1 ಮಾದರಿಯ 1493 ಗುಂಪು ಮನೆಗಳ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಹಕ್ಕು ಪತ್ರ ಪಡೆದುಕೊಂಡು ವಾಸ ಮಾಡುತ್ತಿರುವ ಫಲಾನುಭವಿಗಳ ಮನೆಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಮನೆಗಳಿಗೆ ವಿದ್ಯುತ್ ಸಂಪರ್ಕ, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಒದಗಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಡ್ರೀಯ ಹೆದ್ದಾರಿಗೆ ಕೂಡುವ ನಗರದ ರಿಂಗ್ ರಸ್ತೆ ಶ್ರೀ ನೇತಾಜಿ ಸುಭಾಷಚಂದ್ರ ಭೋಸ ವೃತ್ತದಿಂದ ಸೊಲಾಪೂರ ರಾಷ್ಟ್ರೀಯ ಹೆದ್ದಾರಿ ವರೆಗೆ ವಿದ್ಯುತ್ ಕಂಬಗಳ ಸ್ಥಳಾಂತರ, ಯು.ಜಿ.ಡಿ ಲೈನ್ ಸ್ಥಳಾಂತರ ಹಾಗೂ ಕುಡಿಯುವ ನೀರಿನ ಪೈಪಲೈನ್ಗಳನ್ನು ಸ್ಥಳಾಂತರಿಸಿ, ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ಯುದ್ದೋಪಾದಿಯಲ್ಲಿ ಕೈಗೊಂಡು ತ್ವರಿತ ಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.ವಿಜಯಪುರ ನಗರದ ವಿವಿಧ ವಾರ್ಡಗಳಿಗೆ ಕುಡಿಯುವ ನೀರಿನ ಜಲಮೂಲವಾಗಿರುವ ಭೂತನಾಳ ಕೆರೆಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ಮುಖ್ಯ ಪಾತ್ರವಹಿಸುವ ಅರಕೇರಿ ಜಾಕ್ವೇಲ್ಗೆ ಭೇಟಿ ನೀಡಿದ ಅವರು, ಕುಡಿಯುವ ನೀರು ಸರಬರಾಜು ಪ್ರಕ್ರೀಯೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಕಾಮೆಂಟ್ ಪೋಸ್ಟ್ ಮಾಡಿ