ಪಂಜಾಬ್ ನಲ್ಲಿ ಕೊರೊನಾ ಪ್ರಕರಣಗಳು ಮತ್ತೊಮ್ಮೆ ಹೆಚ್ಚುತ್ತಿರುವ ಹಿನ್ನೆಲೆ, ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿದ್ದು, ವೈಯಕ್ತಿಕ ನೈರ್ಮಲ್ಯ ಕಾಪಾಡಿಕೊಳ್ಳಬೇಕು. ಕೆಮ್ಮು, ಜ್ವರದ ಲಕ್ಷಣವಿದ್ದರೆ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯಬೇಕು. ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಮುನ್ನೆಚ್ಚರಿಕೆ ಅಗತ್ಯವೆಂದು ಸರ್ಕಾರ ತಿಳಿಸಿದೆ.
ಕೊರೊನಾ ಎಚ್ಚರಿಕೆ: ಪಂಜಾಬ್ನಲ್ಲಿ ಮಾಸ್ಕ್ ಧರಿಸಲು ಸಲಹೆ
SAMARA VAANI
0

ಕಾಮೆಂಟ್ ಪೋಸ್ಟ್ ಮಾಡಿ