ಆರ್.ಸಿ.ಬಿ ವಿಜಯೋತ್ಸವಕ್ಕೆ ರಾಜ್ಯಪಾಲರನ್ನು ಅಹ್ವಾನಿಸಿದ್ದು ಯಾರು ಗೊತ್ತಿಲ್ಲ: ಡಿಸಿಎಂ



ಆರ್.ಸಿ.ಬಿ ತಂಡದ ಆಟಗಾರರನ್ನು ಸನ್ಮಾನಿಸಲು ವಿಧಾನಸೌಧದ ಎದುರು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಆಹ್ವಾನಿಸಿದ್ದು ಯಾರು ಎಂಬುದು ತಮಗೆ ಗೊತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ಯಾರು ಎಂಬುದು ನನಗೆ ಗೊತ್ತಿಲ್ಲ. ಅದನ್ನು ನನ್ನನ್ನಲ್ಲ, ಅವರನ್ನೇ ಕೇಳಿ. ನಿವೃತ್ತ ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆ ನಡೆಸುತ್ತಿರುವುದರಿಂದ ಈ ಸಂಬಂಧ ಪ್ರತಿಕ್ರಿಯಿಸುವುದಿಲ್ಲ ಎಂದರು.

Post a Comment

ನವೀನ ಹಳೆಯದು