Top News

ಆರೋಗ್ಯ ಕೇಂದ್ರದ ವೈದ್ಯ, ಸಿಬ್ಬಂದಿಗೆ ಮೊಬೈಲ್ ಹಾಜರಾತಿ ಕಡ್ಡಾಯ: ಸಚಿವ ಗುಂಡೂರಾವ್

ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಜುಲೈ 1ರಿಂದ ಈ ವ್ಯವಸ್ಥೆ ಜಾರಿಗೆ ಬರಲಿದೆ. ಈ ಹೊಸ ಕ್ರಮದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ಸಾರ್ವಜನಿಕರ ದೂರುಗಳು ಇನ್ನುಮುಂದೆ ಕಡಿಮೆಯಾಗಲಿವೆ ಎಂದು ತಿಳಿಸಿದ್ದಾರೆ.

Post a Comment

ನವೀನ ಹಳೆಯದು