ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬ್ಯಾನ್: ಸಚಿವ ರಾಮಲಿಂಗಾರೆಡ್ಡಿ



ರಾಜ್ಯದ ದೇವಸ್ಥಾನಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಣಕ್ಕೆ ತರಲು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ರಾಜ್ಯದ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಬಳಿಕ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗುತ್ತಿದೆ ಎಂದರು. ಇನ್ನು ಕಳೆದ ಮೂರು ತಿಂಗಳಲ್ಲಿ 1,253 ದೇವಾಲಯಗಳನ್ನು ಗುರುತಿಸಲಾಗಿದೆ. 11,322 ಆಸ್ತಿ ಗುರುತಿಸಿ ನಮೂದಿಸಲಾಗಿದೆ ಎಂದರು.

Post a Comment

ನವೀನ ಹಳೆಯದು