ಸಿನಿಮಿಯ ರೀತಿಯಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಶಾಲಾ ಬಸ್


ಶಾಲಾ ವಾಹನವೊಂದು ಅತಿವೇಗದಿಂದ ಬಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆರಿರುವ ಘಟನೆ ಬುಧವಾರ ಬೆಂಗಳೂರಿನ ಮಹದೇವಪುರ ಸಂಚಾರ ಠಾಣಾ ವ್ಯಾಪ್ತಿಯ ಕನ್ನಮಂಗಲ ಗೇಟ್ ಬಳಿ ನಡೆದಿದೆ. ಇನ್ನು ಘಟನೆಯ ದೃಶ್ಯವು ಮತ್ತೊಂದು ವಾಹನದ ಡ್ಯಾಶ್ ಕ್ಯಾಮ್ ನಲ್ಲಿ ಸೆರೆಯಾಗಿದೆ. ನಿಯಂತ್ರಣ ತಪ್ಪಿದ ಶಾಲಾ ವಾಹನ ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಕಾರಿಗೆ ಡಿಕ್ಕಿ ಹೊಡೆದು ನಿಂತಿದೆ. ಬೈಕ್ ಸವಾರ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಪ್ರಕರಣ ಮಹದೇವಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.



Post a Comment

ನವೀನ ಹಳೆಯದು