ಯುವನಿಧಿ ಯೋಜನೆ ಫಲಾನುಭವಿಗಳಿಗೆ ಸಾಮರ್ಥ್ಯಕ್ಕೆ ತಕ್ಕಂತೆ ಕೌಶಲ್ಯಾಭಿವೃದ್ದಿ ತರಬೇತಿ


ಯುವನಿಧಿ ಯೋಜನೆ ಫಲಾನುಭವಿಗಳಿಗೆ ಭವಿಷ್ಯದಲ್ಲಿ ಉದ್ಯೋಗಾವಕಾಶ ಒದಗಿಸಲು ಶೀಘ್ರದಲ್ಲೇ ನೂತನ ಕಾರ್ಯಯೋಜನೆ ರೂಪಿಸಲಾಗುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ ತಿಳಿಸಿದ್ದಾರೆ. ಸೋಮವಾರ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ 6570 ಯುವಕರು ಯೋಜನೆಗೆ ನೋಂದಾಯಿಸಿದ್ದು, ಅವರ ಸಾಮರ್ಥ್ಯಕ್ಕೆ ತಕ್ಕಂತೆ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ, ಉದ್ಯೋಗಾನ್ವೇಷಣೆಗೆ ನೆರವಾಗುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದರು.


Post a Comment

ನವೀನ ಹಳೆಯದು