ಸೋನಿಯಾ ಗಾಂಧಿ ಆರೋಗ್ಯ ಸ್ಥಿರ


ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 78 ವರ್ಷದ ಗಾಂಧಿಯವರು ನಿನ್ನೆ ರಾತ್ರಿ 9ಕ್ಕೆ ದಾಖಲೆಯಾದರು. ಗ್ಯಾಸ್ಟ್ರೋಎಂಟರಾಲಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಇದೀಗ ವೈದ್ಯರ ನಿಗಾವಣೆಯಲ್ಲಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ತಿಂಗಳಲ್ಲಿಯೇ ಎರಡನೇ ಬಾರಿ ಅವರು ಆಸ್ಪತ್ರೆ ದಾಖಲಾಗಿದ್ದಾರೆ.

Post a Comment

ನವೀನ ಹಳೆಯದು