ಕಾಲ್ತುಳಿತ ಪ್ರಕರಣ: ನಾಳೆಗೆ ವಿಚಾರಣೆ ಮುಂದೂಡಿದ ಹೈಕೋರ್ಟ್



ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದಲ್ಲಿ ಬಂಧಿತನಾಗಿರುವ ಆರ್.ಸಿ.ಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಬಂಧನ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ (ಜೂ.10) ಮುಂದೂಡಿದೆ. ಆರ್.ಸಿ.ಬಿ ಸಂಬಂಧಿತ ಕಂಪನಿಗಳು ಹಾಗೂ ಅಧಿಕಾರಿಗಳು ಎಫ್ಐಆರ್ ರದ್ದುಪಡಿಸುವಂತೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಇವುಗಳನ್ನೂ ನಾಳೆ ಒಟ್ಟಿಗೆ ವಿಚಾರಿಸಲಾಗುವುದು ಎಂದು ಹೈಕೋರ್ಟ್ ತಿಳಿಸಿದೆ. ಇನ್ನು ಜೂ.4 ರಂದು ಈ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದರು.

Post a Comment

ನವೀನ ಹಳೆಯದು