ಎಲ್ಲ ವರ್ಗದ ಜನರ ಅಭ್ಯುದಯಕ್ಕಾಗಿ ಸರ್ಕಾರ ಯೋಜನೆಗಳನ್ನು ಜಾರಿಗೊಳಿಸುತ್ತದೆ. ಆ ಯೋಜನೆಗಳ ಲಾಭ ದೊರಕಿಸುವಲ್ಲಿ ಅಧಿಕಾರಿಗಳ ಪಾತ್ರ ಅತ್ಯಂತ ಪ್ರಮುಖವಾಗಿರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರದ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಅರ್ಹ ಫಲಾನುಭವಿಗಳಿಗೆ ಲಾಭ ದೊರಕಿಸಲು ಶ್ರಮಿಸಿದ್ದೀರಿ, ಆ ಯೋಜನೆಗಳ ಲಾಭ ಪಡೆದು ತಮ್ಮ ಬದುಕು ಕಟ್ಟಿಕೊಂಡ ಜನರ ಯಶೋಗಾಥೆಯನ್ನೊಳಗೊಂಡ ಮಾಹಿತಿ ಪುಸ್ತಕವನ್ನು ರಾಜ್ಯದ ಮುಖ್ಯಮಂತ್ರಿಗಳು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ನೀಡಿದಂತೆ ಚಿತ್ರದಲ್ಲಿ ಬಿಂಬಿತವಾಗುತ್ತಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆ ಹಾಗೂ ಸರ್ಕಾರದ ಯೋಜನೆಗಳ ಕುರಿತು ಜೂ.20ರಿಂದ 26ರವರೆಗೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಿರುವ ಮಾಹಿತಿ ವಸ್ತು ಪ್ರದರ್ಶನ ಮಳಿಗೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶುಕ್ರವಾರ ಚಾಲನೆ ನೀಡಿ, ವಸ್ತು ಪ್ರದರ್ಶನ ಮಳಿಗೆಗಳಲ್ಲಿ ಅಳವಡಿಸಲಾದ ಸರ್ಕಾರದ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ, ಯುವನಿಧಿ ಯೋಜನೆಗಳ ಸಮಗ್ರ ಮಾಹಿತಿ, ಫಲಾನುಭವಿಗಳ ಅನಿಸಿಕೆ, ಸರ್ಕಾರವು ವಸತಿ ರಹಿತರಿಗೆ ಸೂರು ಕಲ್ಪಿಸಿದ ಮಾಹಿತಿ, ಇಂದಿರಾ ಕ್ಯಾಂಟೀನ್, ಆರೋಗ್ಯ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನೊಳಗೊಂಡ ಸಮಗ್ರ ಮಾಹಿತಿಯುಳ್ಳ ಫಲಕಗಳನ್ನು ವೀಕ್ಷಣೆ ಮಾಡಿ, ವಸ್ತು ಪ್ರದರ್ಶನದಲ್ಲಿ ನಾಡಿನ ಜನರ ಬದುಕು ಬೆಳಗಿಸಿದ ಗ್ಯಾರಂಟಿ ಯೋಜನೆಗಳ ಸಮಗ್ರ ಮಾಹಿತಿ, ಯಶೋಗಾಥೆಯನ್ನೊಳಗೊಂಡ ಪುಸ್ತಕವನ್ನು ರಾಜ್ಯದ ಮುಖ್ಯಮಂತ್ರಿಗಳಿಂದ ಪಡೆಯುವಂತೆ ಬಿಂಬಿಸುವ ಸೆಲ್ಪಿ ತೆಗೆದುಕೊಂಡು ಜಿಲ್ಲಾಧಿಕಾರಿಗಳು ಎಲ್ಲರ ಗಮನ ಸೆಳೆದರು.

ಉತ್ತಮ ಸುದ್ದಿ ಸರ್
ಪ್ರತ್ಯುತ್ತರಅಳಿಸಿಕಾಮೆಂಟ್ ಪೋಸ್ಟ್ ಮಾಡಿ