ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರು ಮಕ್ಕಳು ಸಾವು


ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಗುರುವಾರ ದುರಂತ ಸಂಭವಿಸಿದ್ದು, ಆಟವಾಡುವಾಗ ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. ಮೃತರನ್ನು ಮುದಸ್ಸೀರ್ ಮತ್ತು ಮುಜಮ್ಮಿಲ್ ಎಂದು ಗುರುತಿಸಲಾಗಿದ್ದು, ಅವರು ಮನೆ ಸಮೀಪದ ಕೆರೆ ಬಳಿ ಆಟವಾಡುತ್ತಿದ್ದರು. ಘಟನೆ ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

Post a Comment

ನವೀನ ಹಳೆಯದು