Top News

ಫ್ಲೈಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದವಾಗಿ ಸಾವು


ಫ್ಲೈಓವರ್ ಮೇಲಿಂದ ಬಿದ್ದು ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಏರ್ ಪೋರ್ಟ್ ರೋಡ್ ನ ಮಾಲ್ ಆಫ್ ಏಷ್ಯಾ ಮುಂಭಾಗದ ರಸ್ತೆಯಲ್ಲಿ ಭಾನುವಾರ ರಾತ್ರಿ 12:30ರ ಸುಮಾರಿಗೆ ನಡೆದಿದೆ. ಹೆಬ್ಬಾಳದ ಶಿವಶಂಕರ್ ಲೇಔಟ್ ನಿವಾಸಿ ಮುನಿರಾಜ್ (22) ಮೃತ ಯುವಕ. ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಮುನಿರಾಜ್, ಫ್ಲೈಓವರ್ ಮೇಲೆ ಬೈಕ್ ನಿಲ್ಲಿಸಿ ಬಳಿಕ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಉಂಟಾಗಿದೆ. ಫ್ಲೈಓವರ್ ಕೆಳಭಾಗದ ರಸ್ತೆಯಲ್ಲಿ ಯುವಕನ ಶವ ಬಿದ್ದಿದ್ದನ್ನು ಕಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Post a Comment

ನವೀನ ಹಳೆಯದು