ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ.5 ಉಪ ಚುನಾವಣೆ -ಅಂತಿಮ ಮತದಾರ ಪಟ್ಟಿ ಪ್ರಕಟ

ವಿಜಯಪುರ : ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ-05ರ ಉಪ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಜುಲೈ 25 ರಂದು  ಪ್ರಕಟಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

ಕರಡು ಮತದಾರರ ಪಟ್ಟಿಗೆ ಜುಲೈ 24ರವರೆಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ಜುಲೈ 25ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


Post a Comment

ನವೀನ ಹಳೆಯದು