ವಿಜಯಪುರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಇದೇ ಫೆಬ್ರವರಿ 02ರಂದು ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5ರವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಜಿಲ್ಲೆಯ ಉದ್ಯೋಗಾಂಕಾಕ್ಷಿಗಳು ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಕರೆ ನೀಡಿದ್ದಾರೆ.
ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಜಿಲ್ಲಾ ಕ್ರೀಡಾಂಗಣದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಮೇಳದಲ್ಲಿ ಉತ್ತರ ಕರ್ನಾಟಕ ಭಾಗದ ಯುವನಿಧಿ ಫಲಾನುಭವಿಗಳು ಹಾಗೂ ಎಸ್.ಎಸ್.ಎಲ್.ಸಿ. ಪಿ.ಯು.ಸಿ, ಐ.ಟಿ.ಐ, ಡಿಪೆÇ್ಲೀಮಾ, ಪದವಿ, ಸ್ನಾತ್ತಕೊತ್ತರ ಪದವಿ ಹಾಗೂ ಇಂಜಿನೀಯರಿಂಗ್ ಪದವಿಯಲ್ಲಿ ಉತ್ತೀರ್ಣರಾದವರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡು, ಉದ್ಯೋಗಮೇಳದಲ್ಲಿ ಭಾಗವಹಿಸಿ, ತಮ್ಮ ಆಸಕ್ತಿ ಹಾಗೂ ಅರ್ಹತೆಗೆ ಅನುಗುಣವಾಗಿ ಉದ್ಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.
ಕರಪತ್ರ ಬಿಡುಗಡೆ: ಉದ್ಯೋಗ ಮೇಳದ ಕರಪತ್ರ ಹಾಗೂ ಪೆÇೀಸ್ಟರ್‍ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ. ಬಿ ಪಾಟೀಲ ಅವರು ಡುಗಡೆಗೊಳಿಸಿದರು.ನೊಂದಣಿಗೆ ಅವಕಾಶ : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವಿಜಯಪುರದ ವತಿಯಿಂದ ಫೆ.2ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡ ಉದ್ಯೋಗ ಮೇಳ, ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಸುವರ್ಣಾವಕಾಶವಿದ್ದು, ಹೆಸರಾಂತ ಕಂಪನಿಗಳಿಂದ ನೇರ ಸಂದರ್ಶನದ ಅವಕಾಶ ಸಿಗಲಿದೆ. ಆಸಕ್ತ ಅಭ್ಯರ್ಥಿಗಳು ಈ https://udyogamela.ksdckarnataka. com/login ಲಿಂಕ್‍ನ್ನು ಕ್ಲಿಕ್ ಮಾಡಿ ತಮ್ಮ ವಿವರವನ್ನು ಭರ್ತಿ ಮಾಡಿ, ಓಟಿಪಿ ನಮೂದಿಸಿ ಲಾಗಿನ್ ಪ್ರೊಫೈಲ್ ಕ್ರಿಯೆಟ್ ಮಾಡಿಕೊಂಡು ನೊಂದಾಯಿಸಿಕೊಳ್ಳಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: 08352-297019 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.


ಕಾಮೆಂಟ್ ಪೋಸ್ಟ್ ಮಾಡಿ