ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

 ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಘಟಕ ವಿಜಯಪುರ ಇವರ ಸಹಯೋಗದಲ್ಲಿ ಜನವರಿ 29,30ಹಾಗೂ 31ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮೂರು ದಿನಗಳವರೆಗೆ ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಜನವರಿ 29 ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸಲಿದ್ದಾರೆ.ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಗೌರವ ಉಪಸ್ಥಿತರಿರುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ವಹಿಸಲಿದ್ದಾರೆ. ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಹಾಗೂ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕರಾದ ಅಪ್ಪಾಜಿ ಸಿ.ಎಸ್ ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಸುಧಾ ಮೂರ್ತಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಬಿ.ಎಸ್.ಕವಲಗಿ, ಪಾಲಿಕೆ ಮೇಯರ್ ಎಂ.ಎಸ್.ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಮುಶ್ರೀಪ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ, ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ,ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು,

ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿರುವರು ಎಂದು ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

ನವೀನ ಹಳೆಯದು