Top News

ಬಾಕಿ ಮೋಟಾರು ವಾಹನ ಕಾಯ್ದೆ ಹಾಗೂ ನಿಯಮಗಳ ಉಲ್ಲಂಘನೆ ಪ್ರಕರಣ: ದಂಡದ ಮೊತ್ತದಲ್ಲಿ ಶೇ.50ರಷ್ಟಯ ರಿಯಾಯಿತಿ

 ವಿಜಯಪುರ: ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2021-22 (31-03-2022)ರವರೆಗೆ ಮೋಟಾರು ವಾಹನ ಕಾಯ್ದೆ ಹಾಗೂ ನಿಯಮಗಳ ಉಲ್ಲಂಘನೆಗೆ ಸಂಬAಧಿಸಿ ದಾಖಲಾಗಿರುವ ಮತ್ತು ಬಾಕಿ ಉಳಿದಿರುವ ಡಿ.ಎಸ್.ಎ. (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡಲಾಗಿದೆ. ಬಾಕಿ ಪ್ರಕರಣಗಳ ಇತ್ಯರ್ಥಕ್ಕಾಗಿ ವಿಶೇಷ ಅವಕಾಶ ಕಲ್ಪಿಸಲಾಗಿದ್ದು,ದಿನಾಂಕ:21-06-2026ರಿAದ 10-07-2026ರವರೆಗೆ ಪ್ರಕರಣಗಳನ್ನು ಇತ್ಯರ್ತಪಡಿಸಿಕೊಳ್ಳಲು ಕಾಲಾವಕಾಶ ಕಲ್ಪಿಸಲಾಗಿದೆ. 

ಈ ಅವಧಿಯಲ್ಲಿ ವಾಹನ ಮಾಲೀಕರು ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದ   ಶೇ.50ರಷ್ಟು ಹಣವನ್ನು ಪಾವತಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ದಂಡದ ಮೊತ್ತ ಪಾವತಿಸಲು ಯಾವುದೇ ಆನ್‌ಲೈನ್ ವ್ಯವಸ್ಥೆ ಅಥವಾ ಲಿಂಕ್ ಇರುವುದಿಲ್ಲ. ವಾಹನ ಮಾಲೀಕರು ಕಚೇರಿ ಅವಧಿಯಲ್ಲಿ ಸಂಬAಧಿಸಿದ ಸಾರಿಗೆ ಕಚೇರಿಗೆ ಭೇಟಿ ನೀಡಿ, ನಗದು ಕೌಂಟರ್‌ನಲ್ಲಿ ದಂಡದ ಮೊತ್ತವನ್ನು ಪಾವತಿಸಿ ಅಧಿಕೃತ ರಸೀದಿ ಪಡೆದು ತಮ್ಮ ಪ್ರಕರಣಗಳನ್ನು ಮುಕ್ತಾಯಗೊಳಿಸಬಹುದು. ವಾಹನ ಮಾಲೀಕರು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು  ತಿಳಿಸಿದ್ದಾರೆ.

Post a Comment

ನವೀನ ಹಳೆಯದು