ವಿಜಯಪುರ: ಕೊಲೆ ಆರೋಪದ ಮೇಲೆ ಬಂಧನಕ್ಕೊಳಗಾದ ಆರೋಪಿ ರಫೀಕ ಬಳಗಾನೂರಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ .ಎ ರವರು ಆದೇಶ ಹೊರಡಿಸಿದ್ದಾರೆ.
ವಿಜಯಪುರ ನಗರದ ಜಲನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರು.
ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ, ಸಾಕ್ಷಿ ಪುರಾವೆಗಳನ್ನು ಅವಲೋಕಿಸಿ ಆರೋಪಿ ರಫೀಕ ಬಳಗಾನೂರ ಇವನ ಮೇಲಿನ ಆರೋಪ ರುಜುವಾತಾದ ಹಿನ್ನಲೆಯಲ್ಲಿಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ದಿನಾಂಕ : 30-06-2026 ರಂದು ನ್ಯಾಯಾಲಯ ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಪ್ರಧಾನ ಸರಕಾರಿ ಅಭಿಯೋಜಕ ಎಸ್.ಎಚ್.ಹಕೀಮ ವಾದ ಮಂಡಿಸಿದ್ದರು.

ಕಾಮೆಂಟ್ ಪೋಸ್ಟ್ ಮಾಡಿ