ವಿಜಯಪುರ : ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕಿಂಚಿತ್ತೂ ಅಭಿವೃದ್ಧಿ ಕಾರ್ಯ ಅನುಷ್ಠಾನ ಗೊಳಿಸದೇ ಕಾಂಗ್ರೆಸ್ ಹಾಗೂ ಸಿದ್ಧರಾಮಯ್ಯ ಅವರು ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಯ ಕಗ್ಗೊಲೆ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ. ಲಕ್ಷ್ಮೀನಾರಾಯಣ ಅಸಮಾಧಾನ ಹೊರಹಾಕಿದರು.
ಸುದ್ದಿಗೋಷ್ಠಿಯಲ್ಲಿ
ಮಾತನಾಡಿದ ಅವರು, ಮಧುಸೂಧನ ನಾಯಕ ಅವರು ನೀಡಿರುವ ವರದಿಯನ್ನು ಗೌಪ್ಯವಾಗಿ ಇರಿಸಿದೇ ಅದನ್ನು ಸದನದಲ್ಲಿ
ಮಂಡನೆ ಮಾಡಲೇಬೇಕು, ಅದರ ಸಮಗ್ರ ಚರ್ಚೆಗೊಳಪಡಿಸಬೇಕು, ಇಲ್ಲವಾದರೆ ಹಿಂದುಳಿದ ವರ್ಗಗಳಿಗೆ ನ್ಯಾಯ
ಒದಗಿಸುವ ದೃಷ್ಟಿಯಿಂದ ವಿಧಾನಸಭೆಗೆ ಮುತ್ತಿಗೆ ಹಾಕಲು ನಾವು ಹಿಂದೇಟು ಹಾಕುವುದಿಲ್ಲ, ಕೂಡಲೇ ಮುಖ್ಯಮಂತ್ರಿ
ಡಿ.ಕೆ. ಶಿವಕುಮಾರ್ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಹಿಂದುಳಿದ
ವರ್ಗಗಳು ಕಾಂಗ್ರೆಸ್ ಅವಧಿಯಲ್ಲಿ ತತ್ತರಿಸಿ ಹೋಗಿವೆ, ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ
ವರದಿಯನ್ನು ಸ್ವೀಕರಿಸಲೇ ಇಲ್ಲ, ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುವುದಾಗಿ ಹೇಳಿ ಅಧಿಕಾರ ನಡೆಸಿದ
ಸಿದ್ಧರಾಮಯ್ಯ ಅಧಿಕಾರದಲ್ಲಿದ್ದಾಗ ಹಿಂದುಳಿದ ವರ್ಗಗಳ ಬಗ್ಗೆ ಚಕಾರ ಎತ್ತದೇ ದೊಡ್ಡ ಅನ್ಯಾಯ ಮಾಡಿದ್ದಾರೆ,
ಬಜೆಟ್‌ನಲ್ಲಿ ಕೇವಲ ೧೦೦ ಕೋಟಿ ರೂ. ಮೀಸಲಿರಿಸುವ ಮೂಲಕ ಮೂಗಿಗೆ ತುಪ್ಪ ಒರೆಸುವ ಕಾರ್ಯ ಮಾಡಿದ ಅವರಿಗೆ
ಹಿಂದುಳಿದ ವರ್ಗ ಹಾಗೂ ದೇವರು ಮೆಚ್ಚುವುದಿಲ್ಲ ಎಂದರು. ಬಿಹಾರ, ತೆಲಂಗಾಣ ಸೇರಿದಂತೆ ಎಲ್ಲ ರಾಜ್ಯಗಳು
ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿವೆ, ಅಹಿಂಧ ವರ್ಗದ ಐಕಾನ್ ಆಗಿದ್ದ ಸಿದ್ಧರಾಮಯ್ಯ
ಅವರು ಮಾತ್ರ ಎರಡು ಅವಧಿಯಲ್ಲಿಯೂ ಹಿಂದುಳಿದ ವರ್ಗಕ್ಕೆ ಆದ್ಯತೆ ನೀಡಲೇ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.
ಶಾಸಕ ಯತ್ನಾಳ ಅವರ ಪಕ್ಷಕ್ಕೆ ಕರೆ ತರುವ ವಿಷಯವಾಗಿ ನಾನು ಪ್ರತಿಕ್ರಿಯೆ ನೀಡಲು ಅಸಾಧ್ಯ, ಪಕ್ಷದ ವರಿಷ್ಠರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ, ಇದು ಪಕ್ಷದ ಆಂತರಿಕ ವಿಷಯ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಿಗೂ ತಡೆಯುವಂತಿಲ್ಲ ಎಂದರು.

ಕಾಮೆಂಟ್ ಪೋಸ್ಟ್ ಮಾಡಿ