Top News

ಈಗಿರುವ ಸಿಎಂ ಡಿ.ಕೆ.ಶಿವಕುಮಾರ ಮೇಲೆ ಭರವಸೆ ಇಲ್ಲ

ವಿಜಯಪುರ: ಈಗಿರುವ ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುತ್ತಾರೆ ಎಂಬ ಭರವಸೆ ನಮಗಿಲ್ಲ ಎಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣು ತಳಕೇರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಹಿರಂಗವಾಗಿಯೇ ಕಾಂತರಾಜ್ ಆಯೋಗದ ವರದಿಯ ಬಗ್ಗೆ ಅಪಸ್ವರ ಹಾಕಿದ ಅವರು ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುತ್ತಾರೆ ಎಂಬ ವಿಶ್ವಾಸ ನಮಗಿಲ್ಲ, ಈ ವಿಷಯದಲ್ಲಿ ಸಿದ್ಧರಾಮಯ್ಯ ಮೌನ ವಹಿಸಬಾರದು, ತಾವೇ ರೂಪಿಸಿದ ವರದಿಯನ್ನು ಸಿದ್ಧರಾಮಯ್ಯ ಒಪ್ಪಬೇಕು, ಅವರ ಮೌನ ಅನೇಕ ಸಂಶಯಗಳಿಗೆ ಕಾರಣವಾಗಿದೆ ಎಂದರು.

ಹಿಂದುಳಿದ ವರ್ಗಗಳ ನೇತಾರ ಡಿ.ದೇವರಾಜ್ ಅರಸು ಅವರ ದಾಖಲೆ ಮುರಿದಿರುವೆ ಎಂದು ಅಹಂಕಾರದಿಂದ ಬೀಗುತ್ತಿರುವ ಸಿದ್ಧರಾಮಯ್ಯ ಅವರು ರಾಜಿನಾಮೆ ನೀಡುವ ಮುನ್ನ ತರಾತುರಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕರಿಸಿ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಅನ್ಯಾಯ ಮಾಡಿದ್ದಾರೆ ಎಂದರು.  ತೆಲಂಗಾಣದಲ್ಲಿ 75 ದಿನದಲ್ಲಿ ಹಿಂದುಳಿದ ವರ್ಗಗಳ ಸಮೀಕ್ಷೆ ಪೂರ್ಣಗೊಳಿಸಿದ್ದಾರೆ, ಆದರೆ ಇಲ್ಲಿರುವ ಕಾಂಗ್ರೆಸ್ ಸರ್ಕಾರ ದುರುದ್ದೇಶಪೂರ್ವಕವಾಗಿ ಹಿಂದುಳಿದ ವರ್ಗಗಳ ವರದಿಯನ್ನು ಸ್ವೀಕರಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ, ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಬಿಜೆಪಿ ಮುಖಂಡರಾದ ಸಾಬು ಮಾಶ್ಯಾಳ, ರಾಜಕುಮಾರ ಸಗಾಯಿ, ಶಿವರುದ್ರ ಬಾಗಲಕೋಟ, ವಿಜಯ ಜೋಶಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Post a Comment

ನವೀನ ಹಳೆಯದು